(1) ರಾಜ್ಯ ಸರ್ಕಾರವು, ಈ ಅಧ್ಯಾದೇಶದ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಪೂರ್ವಾನ್ವಯವಾಗಿ ಅಥವಾ ಉತ್ತರಾನ್ವಯವಾಗಿ, ನಿಯಮಗಳನ್ನು ರಚಿಸಬಹುದು.
(2) ಈ ಅಧ್ಯಾದೇಶದ ಅಡಿಯಲ್ಲಿ ರಚಿಸಿದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ ಸಾಧ್ಯವಾದಷ್ಟು ಬೇಗನೇ ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಅದು ಅಧಿವೇಶನದಲ್ಲಿರುವಾಗ, ಒಂದು ಅಧಿವೇಶನ ಅಥವಾ ಎರಡು ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವ್ವತ್ತು ದಿನಗಳವರೆಗೆ ಮಂಡಿಸತಕ್ಕದ್ದು ಮತ್ತು ಅದನ್ನು ಹಾಗೆ ಮಂಡಿಸಿದ ಅಧಿವೇಶನ ಅಥವಾ ನಿಕಟೋತ್ತರ ಅಧಿವೇಶನಗಳು ಮುಕ್ತಾಯವಾಗುವ ಮೊದಲು, ವಿಧಾನಮಂಡಲದ ಉಭಯಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಟುಮಾಡಬೇಕೆಂದು ಒಪ್ಪಿದರೆ ಅಥವಾ ನಿಯಮವನ್ನು ರಚಿಸಬಾರದೆಂದು ತೀರ್ಮಾನಿಸಿದರೆ, ಆ ತರುವಾಯ ಅಂಥ ನಿಯಮವು ಸಂದರ್ಭಾನುಸಾರ ಹಾಗೆ ಮಾರ್ಪಾಟಾದ ರೀತಿಯಲ್ಲಿ ಮಾತ್ರ ಪರಿಣಾಮಕಾರಿಯಾಗಿರತಕ್ಕದ್ದು ಅಥವಾ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಅಂಥ ಮಾರ್ಪಾಟು ಅಥವಾ ರದ್ದತಿಯು ಆ ನಿಯಮದ ಅಥವಾ ಅಧಿಸೂಚನೆಯ ಅಡಿಯಲ್ಲಿ ಈ ಹಿಂದೆ ಮಾಡಿದ ಯಾವುದೇ ಕಾರ್ಯಕ್ಕೂ ಬಾಧಕವಾಗತಕ್ಕದ್ದಲ್ಲ.
ಟಿ.ಎನ್. ಚತುರ್ವೇದಿ ಕರ್ನಾಟಕ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಜಿ.ಕೆ. ಬೋರೇಗೌಡ
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ.
5