(1) ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
(ಎ) “ಅಧಿನಿಯಮ” ಎಂದರೆ, ಕರ್ನಾಟಕ ನರ್ಸಿಂಗ್ ಮತ್ತು ಅರೆವೈದ್ಯಕೀಯ ವಿಜ್ಞಾನಗಳ ಶಿಕ್ಷಣ (ನಿಯಂತ್ರಣ) ಪ್ರಾಧಿಕಾರ ಅಧಿನಿಯ ಮ, 2012 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ 10).
(ಬಿ) “ಆರ್ಥಿಕ ವರ್ಷ” ಎಂದರೆ, ಏಪ್ರಿಲ್ 1 ರಿಂದ ಪ್ರಾರಂಭವಾಗಿ ಮಾರ್ಚ್ 31ರವರೆಗೆ ಮುಕ್ತಾಯ ವಾಗುವುದು.
(ಸಿ) “ನಮೂನೆ” ಎಂದರೆ ಈ ನಿಯಮಗಳಿಗೆ ಸೇರಿಸಲಾದ ನಮೂನೆ.
(ಡಿ) “ಅನುಬಂಧ” ಎಂದರೆ ಈ ನಿಯ ಮಗಳಿಗೆ ಸೇರಿಸಲಾದ ಅನುಬಂಧ.
(ಇ) “ಪ್ರಕರಣ” ಎಂದರೆ ಅಧಿನಿಯಮದ ಪ್ರಕರಣ.
(2) ಈ ನಿಯ ಮಗಳಲ್ಲಿ ಪರಿಭಾಷಿಸಲಾಗದ ಆದರೆ ಬಳಸಲಾದ ಪದಗಳು ಮತ್ತು ಅಭಿವ್ಯಕ್ತಿಗಳು ಅಧಿನಿಯಮದಲ್ಲಿ ಅವುಗಳಿಗೆ ಅನುಕ್ರಮವಾಗಿ ಗೊತ್ತುಪಡಿಸಲಾದ ಅದೇ ಅರ್ಥವನ್ನು ಹೊಂದಿರತಕ್ಕದ್ದು.