(1) ಈ ನಿಯಮಗಳನ್ನು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ನಿಯಮಗಳು, 2019 ಎಂದು ಕರೆಯತಕ್ಕದ್ದು.
(2) ಅವು, ರಾಜ್ಯಪತ್ರದಲ್ಲಿ ಇವುಗಳನ್ನು ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ನಿಯಮಗಳು, 2019, Information Technology, Bio-Technology & Science & Technology Department
2019 · PDF page 1
Hover any section to copy its link or text, ask Copilot about it, or bookmark it.
(1) ಈ ನಿಯಮಗಳಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು:-
ಎ) "ಅಧಿನಿಯಮ" ಎಂದರೆ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2018 (2018ರ ಕರ್ನಾಟಕ ಅಧಿನಿಯಮ ಸಂ.09);
ಬಿ) "ನಮೂನೆ" ಎಂದರೆ, ಈ ನಿಯಮಗಳಿಗೆ ಅನುಬಂಧಿಸಿದ ನಮೂನೆ;
ಸಿ) "ಕೋರಂ" ಎಂದರೆ, ಸಲಹಾ ಸಮಿತಿಯ ಸಭೆಯನ್ನು ನಡೆಸುವುದಕ್ಕೆ ಕೋರಂ;
ಡಿ) "ಪ್ರಕರಣ" ಎಂದರೆ, ಅಧಿನಿಯಮದ ಪ್ರಕರಣ;
(2) ಈ ನಿಯಮಗಳಲ್ಲಿ ಬಳಸಿರುವ ಆದರೆ ಪರಿಭಾಷಿಸದಿರುವ ಇತರ ಪದಗಳು ಮತ್ತು ಪದಾವಳಿಗಳು, ಅಧಿನಿಯಮದಲ್ಲಿ ಪರಿಭಾಷಿಸಿರುವ ಅದೇ ಅರ್ಥವನ್ನು ಹೊಂದಿರತಕ್ಕದ್ದು.