ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) ಅಧಿನಿಯಮ, 2002ರ (2003ರ ಕರ್ನಾಟಕ ಅಧಿನಿಯಮ 45) (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 2ನೇ ಪ್ರಕರಣದಲ್ಲಿ,-
(1) (ia) ಖಂಡದ ಕೊನೆಯಲ್ಲಿ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ: -
“ಕಾನೂನು ಮಾಪನ ಅಧಿನಿಯಮ, 2009 (2010ರ ಕೇಂದ್ರ ಅಧಿನಿಯಮ 1) ಅಥವಾ ಅದರಡಿಯಲ್ಲಿ ಮಾಡಲಾದ ನಿಯಮಗಳು, ಕರ್ನಾಟಕ ಪೌರಸಭೆಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 22), ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ, 1976 (1977ರ ಕರ್ನಾಟಕ ಅಧಿನಿಯಮ 14), ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ 18), ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಅಧಿನಿಯಮ, 1966 (1966ರ ಕರ್ನಾಟಕ ಅಧಿನಿಯಮ. 18), ಕರ್ನಾಟಕ ಅಗ್ನಿಶಾಮಕ ದಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ, 1976 (1976ರ ಕರ್ನಾಟಕ ಅಧಿನಿಯಮ 76) ಕರ್ನಾಟಕ ಅರಣ್ಯ ನಿಯಮಗಳು, 1969, ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12), ಕರ್ನಾಟಕ ಭೂ ಸುಧಾರಣೆಗಳ ಅಧಿನಿಯಮ, 1961 (1962ರ ಕರ್ನಾಟಕ ಅಧಿನಿಯಮ 34), ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11), ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ನೀತಿಗಳು”.
(ii) (iiಎ)ನೇ ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-
“(1-ಎ) “ಉತ್ಪಾದನಾ ಉದ್ಯಮ” ಎಂದರೆ ಕೈಗಾರಿಕೆಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ಅಧಿನಿಯಮ, 1951ರ ಮೊದಲನೇ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಯಾವುದೇ ಕೈಗಾರಿಕೆಗೆ ಸಂಬಂಧಪಟ್ಟ ಸರಕುಗಳ ಉತ್ಪಾದನೆ ಅಥವಾ ತಯಾರಿಕೆಗೆ ಸಂಬಂಧಪಟ್ಟ ಸರಕುಗಳ ಉತ್ಪಾದನೆ ಅಥವಾ ತಯಾರಿಕೆಯಲ್ಲಿ ತೊಡಗಿರುವ ಉದ್ಯಮ, ಅಥವಾ ವಿಶಿಷ್ಟವಾದ ಹೆಸರು ಅಥವಾ ಸ್ವಭಾವ ಅಥವಾ ಉಪಯೋಗವನ್ನು ಹೊಂದಿರುವ ಅಂತಿಮ ಉತ್ಪನ್ನಕ್ಕೆ ಮೌಲ್ಯವರ್ಧನೆಯ ಪ್ರಕ್ರಿಯೆಯಲ್ಲಿ ಬಳಸಲಾದ ಕಾರ್ಹಾನೆ ಮತ್ತು ಯಂತ್ರಘಟಕ.
(11-ಬಿ) “ ಉತ್ಪಾದನಾ ಕೈಗಾರಿಕೆ” ಎಂದರೆ ಪದಾರ್ಥಗಳ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ತೊಡಗಿರುವ ಮತ್ತು ಹೊಸ ಸಾಮಗ್ರಿಗಳ ಸೃಜನೆ ಅಥವಾ ಮೌಲ್ಯ ವರ್ಧನೆಯಲ್ಲಿ ನಿರತವಾಗಿರುವ ಉದ್ಯಮ”.