(1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ BOLT) ನಿಯಮಗಳು, 2012 ಎಂದು ಕರಿಯತಕ್ಕದ್ದು.
(2) ಇವು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
(3) ವಾಹನ ಚಾಲಕರು, ಪ್ರಾಥಮಿಕ ಶಾಲಾ ಶಿಕ್ಷಕರು, ಪೊಲೀಸ್ ಕಾನ್ಸಟೀಬಲ್ಗಳು, ನರ್ಸ್ಗಳು, ರೇಷ್ಮೆ ಪ್ರದರ್ಶಕರು, ಅರಣ್ಯ ರಕ್ಷಕರು, ಅಬಕಾರಿ ರಕ್ಷಕರು, ಆರೋಗ್ಯ ಕಾರ್ಯಕರ್ತರು, ಅರಣ್ಯ ವೀಕ್ಷಕರು, BOP ಮತ್ತು ಪ್ರೊಸಸ್ ಸರ್ವರ್ಗಳು ಮತ್ತು ಡಿ ಗುಂಪಿನ ಹುದ್ದೆಗಳು ಈ ಹುದ್ದೆಗಳಿಗೆ ಆಯ್ಕೆಗೊಳ್ಳುವ ಅಥವಾ ಈ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹಾಗೂ ಕಾಲಕಾಲಕ್ಕೆ ಸರ್ಕಾರವು ಅಧಿಸೂಚಿಸಬಹುದಾದ ಇತರೆ ಹುದ್ದೆಗಳಿಗೆ ಈ ನಿಯಮಗಳು ಅನ್ವಯವಾಗತಕ್ಕದ್ದಲ್ಲ.