ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977 ಅಥವಾ ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿವಿಯಮ, 1978 (1990ರ ಕರ್ನಾಟಕ ಅಧಿನಿಯಮ 14) ರಡಿಯಲ್ಲಿ ಯಾವುದೇ ಸೇವೆ ಅಥವಾ ಹುದ್ದೆಗೆ ಸಂಬಂಧಿಸಿದಂತೆ ವಿಶೇಷವಾಗಿ ರಚಿಸಿರುವ ಅಥವಾ ರಚಿಸಲಾಗಿದೆ ಎಂದು ಭಾವಿಸಲಾದ, ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಯಾವುದೇ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಯು, ವಿಯಮ 1ರ ಉಪನಿಯಮ (3ರಲ್ಲಿ. ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ, ಸರ್ಕಾರವು ನಿಗದಿಪಡಿಸಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೇಯನ್ನು ಶೇಕಡ 60 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಡೆದು ಆಯ್ಕೆಯಾದ ಮೂರು ತಿಂಗಳೊಳಗೆ ಪಾಸು ಮಾಡದಿದಲ್ಲಿ, ಅಂತಹ ಅಭ್ಯರ್ಥಿಯನ್ನು ನೇಮಕ ಮಾಡತಕ್ಕದ್ದಲ್ಲ. ಅಂತಹ ಪರೀಕ್ಷೇಯನ್ನು ಸರ್ಕಾರ ಅಥವಾ ಅದು ಅನುಮೋದಿಸಿದ ಏಜೆನ್ಸಿಯು ನಡೆಸತಕ್ಕದ್ದು.
Loading…