ಈ ನಿಯಮಗಳಲ್ಲಿ ಅನ್ಯತಾ ಸಂದರ್ಭಕ್ಕೆ ಅಗತ್ಯವಿರದ ಹೊರತು,-
(1) “ಅಧಿನಿಯಮ” ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993; (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)
(2) “ಅನುಸೂಚಿ” ಎಂದರೆ ಈ ನಿಯಮಗಳಿಗೆ ಲಗತ್ತಿಸಲಾಗಿರುವ ಅನುಸೂಚಿ;
(3) “ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ” ಎಂದರೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ.